ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪವಿತ್ರ ಧಾರ್ಮಿಕ ಕೇಂದ್ರವಾದ ಆದಿಚುಂಚನಗಿರಿಗೆ ಫೆಬ್ರವರಿ 23ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ.
ಈ ಪ್ರವಾಸದ ವೇಳೆ ಅವರು ಪರಮಪೂಜ್ಯ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ವಿಚಾರಗಳ ಕುರಿತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶೀಘ್ರದಲ್ಲೇ ಮಠದ ವತಿಯಿಂದ ಈ ಭೇಟಿಯ ಅಧಿಕೃತ ವೇಳಾಪಟ್ಟಿ ಪ್ರಕಟವಾಗಲಿದೆ.

