‘ಟಾಟಾ, ಬೈಬೈ’ ಹೇಳಲು ಮೋದಿ RSS ಕಚೇರಿಗೆ ಭೇಟಿ ನೀಡಿದ್ರು: ಸಂಜಯ್ ರಾವತ್ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಈ ಭೇಟಿಯು ಪ್ರಧಾನಿ ನಿವೃತ್ತರಾಗಲು ಯೋಜನೆಗಳನ್ನು ರೂಪಿಸುತ್ತಿದ್ದು ಇದು ಅದಕ್ಕೆ ಸಂಬಂಧಿಸಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಕಳೆದ 10ರಿಂದ 11 ವರ್ಷಗಳಲ್ಲಿ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೆ ಈಗ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ “ಟಾಟಾ, ಬೈ, ಬೈ” ಹೇಳಲು ಅಲ್ಲಿಗೆ ಭೇಟಿ ನೀಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮೋದಿ ಬಹುಶಃ ತಮ್ಮ ನಿವೃತ್ತಿ ಅರ್ಜಿಯನ್ನು ಸಲ್ಲಿಸಲು ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಹೋಗಿರಬಹುದು ಎಂದು ಸಂಜಯ್ ರಾವತ್ ಹೇಳಿದ್ದಾರೆ. ಆರ್‌ಎಸ್‌ಎಸ್ ಭಾರತದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತಿದೆ. ನಾನು ಅರ್ಥ ಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ. ಆರ್​ಎಸ್​ಎಸ್​ ಮುಂದಿನ ಪ್ರಧಾನಿಯನ್ನು ಆಯ್ಕೆ ಮಾಡಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!