ಆ.26 ರಂದು ಇಸ್ರೋಗೆ ಮೋದಿ ಭೇಟಿ; ರೋಡ್‌ ಶೋ ಇಲ್ಲ : ಸಚಿವೆ ಶೋಭಾ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ‘ಇಸ್ರೋ’ದ ಅಧ್ಯಕ್ಷ ಸೋಮನಾಥ್ ಸೇರಿದಂತೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು ಆ.26ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆದರೆ ಆ ವೇಳೆ ಯಾವುದೇ ರೋಡ್‌ ಶೋ ಆಯೋಜನೆ ಆಗಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ದಾಸರಹಳ್ಳಿ ಕ್ಷೇತ್ರದಲ್ಲಿ ಒಂದು ಕಿ.ಮೀ ವರೆಗೆ ರೋಡ್ ಶೋ ನಡೆಸಲಿದ್ದೇವೆ ಎಂದು ಮಾಜಿ ಸಚಿವ ಆರ್.‌ ಅಶೋಕ್‌ ಹೇಳಿಕೆ ನೀಡಿದ್ದರು. ಈ ಬಗ್ಗೆ ಸುದ್ದಿಗಾರರೋಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಧಾನಿ ಮೋದಿ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳ ಜತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ ಏರ್‌ಪೋರ್ಟ್‌ನಲ್ಲಿ ಅವರಿಗೆ ಸ್ವಾಗತ ಕಾರ್ಯಕ್ರಮ ನಡೆಯಲಿದೆ, ರೋಡ್ ಶೋ ಯೋಜ‌ನೆ ಆಗಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!