ಕಲಬುರಗಿಗೆ ಮೋದಿ ಭೇಟಿ: ಡ್ರೋನ್ ಹಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸುವ ನಿರೀಕ್ಷೆ ಇದೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪ್ರಧಾನಮಂತ್ರಿ ಆವಾಸ್ ಕಾರ್ಯಕ್ರಮದಡಿ ಬಡವರಿಗೆ ಮನೆ ಮಾಲೀಕತ್ವ ಪ್ರಮಾಣ ಪತ್ರ ವಿತರಣೆಯಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ಕ್ಯಾಮೆರಾ ಇರುವ ಡ್ರೋನ್‌ಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ.

ಕಲಬುರಗಿ ವಿಮಾನ ನಿಲ್ದಾಣದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮೆರಾ ಹಾರಾಟವನ್ನು ನಿಷೇಧಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಜಿಲ್ಲಾಡಳಿತ ಡ್ರೋನ್ ಕ್ಯಾಮೆರಾ ಬಳಕೆಗೆ ನಿಷೇಧ ಹೇರಿದೆ. ಸಿಆರ್‌ಪಿಸಿ ಕಾಯ್ದೆಯ ಸೆಕ್ಷನ್ 144 ರ ಅಡಿಯಲ್ಲಿ ಡ್ರೋನ್ ಕ್ಯಾಮೆರಾಗಳೊಂದಿಗೆ ಹಾರಾಟವನ್ನು ನಿಷೇಧಿಸಲಾಗಿದೆ ಮತ್ತು ಇಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಯಾರೂ ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ.

ಬೆಳಗ್ಗೆ 9:35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಅಲ್ಲಿಂದ 9:40ಕ್ಕೆ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದು, ನಂತರ 12ಕ್ಕೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಸೊಲ್ಲಾಪುರದಿಂದ ಕಲಬುರಗಿ ವಿಮಾನ ನಿಲ್ದಾಣ ತಲುಪಿ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೊರಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!