ಹೊಸದಿಗಂತ ಡಿಜಿಟಲ್ ಡೆಸ್ಕ್;
ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಅಲ್ಲಿ ಅಧಿಕಾರಿಗಳಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ಪ್ರಧಾನಿ ಮೋದಿಯವರೊಂದಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಉಪಸ್ಥಿತರಿದ್ದರು.
ಬಳಿಕ ಪ್ರಧಾನಿ ಮೋದಿ ಅವರು ಭೂಕುಸಿತ ಸಂತ್ರಸ್ತರನ್ನು ಭೇಟಿಯಾದರು.ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಸಂತ್ರಸ್ತರ ಕಷ್ಟಗಳನ್ನು ಆಲಿಸಿದರು. ಸಂತ್ರಸ್ತರಿಗೆ ಸಾಂತ್ವನ ಹೇಳಿದ ಪ್ರಧಾನಿ, ಸರ್ಕಾರ ಅವರೊಂದಿಗಿದೆ ಎಂದು ಹೇಳಿದರು.”
ಭೂಕುಸಿತದ ವೈಮಾನಿಕ ಸಮೀಕ್ಷೆಯ ಸಂದರ್ಭದಲ್ಲಿ, ಭೂಕುಸಿತಕ್ಕೆ ಕಾರಣವೇನು ಎಂದು ಪ್ರಧಾನಿ ಕೇಳಿದರು ಮತ್ತು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾದ ಪುಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚುರಲ್ಮಲಾಗಳ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು. ಈ ವೇಳೆ ಸಿಎಂ ಪಿ ವಿಜಯನ್ ಕೂಡ ಜೊತೆಗಿದ್ದರು.