ಮೋದಿಯವರೇ INDIA ಹೆಸರ ಕುರಿತು ನಿಮಗೆ ಯಾಕೆ ಇಷ್ಟೊಂದು ದ್ವೇಷ?: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೋದಿಯವರೇ ಇಂಡಿಯಾ ಎಂಬ ಸುಂದರ, ಹೆಸರ ಕುರಿತು ನಿಮಗೆ ಯಾಕೆ ಇಷ್ಟೊಂದು ದ್ವೇಷ?:ಸಿಎಂ ಸಿದ್ದರಾಮಯ್ಯ
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ, ಭಾರತವನ್ನು ಲೂಟಿ ಹೊಡೆದ ಈಸ್ಟ್ ಇಂಡಿಯಾ ಕಂಪನಿ ಕೂಡ INDIA ಹೆಸರನ್ನೇ ಇಟ್ಟುಕೊಂಡಿತ್ತು ಎಂದು ಪ್ರಧಾನಿ ಮೋದಿ ಮಾತಿಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಅವರು, ಪ್ರಧಾನಿ ಮೋದಿಯವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?

ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ ಮೋದಿ ಅವರೇ. ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ?

ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!