ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ: ಇದು ಗ್ಯಾರಂಟಿ ಎಂದ ಮಮತಾ ಬ್ಯಾನರ್ಜಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ಇಂಡಿಯಾ ಮೈತ್ರಿಕೂಟವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದೇ ಗ್ಯಾರಂಟಿಯಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.

ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಸಂದೇಶ್‌ಖಾಲಿ ಪ್ರಕರಣದಲ್ಲಿ ಬಿಜೆಪಿ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಬಂಗಾಳದ ಮಹಿಳೆಯರ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಬಾರಿ ಎನ್‌ಡಿಎ ಮೈತ್ರಿಕೂಟಕ್ಕೆ 200 ಸೀಟುಗಳು ಲಭಿಸುವುದು ಕಷ್ಟ. ಹೀಗಾಗಿ ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿಯಾಗಿದೆ ಎಂದು ಮಮತಾ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!