ಹೊಸದಿಗಂತ ಡಿಜಿಟಲ್ ಡೆಸ್ಕ್:
12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
ಪ್ರಧಾನಿ ಮೋದಿ, ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ… ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಘಟಿತ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.