ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕಳೆದ ಐದು ವರ್ಷಗಳ ಬಳಿಕ ಮೊದಲ ರಚನಾತ್ಮಕ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಭಾರತ ಮತ್ತು ಚೀನಾ ಪ್ರಬುದ್ಧತೆ ಮತ್ತು ಪರಸ್ಪರ ಗೌರವವನ್ನು ಪ್ರದರ್ಶಿಸುವ ಮೂಲಕ ಶಾಂತಿಯುತ ಮತ್ತು ಸ್ಥಿರ ಸಂಬಂಧವನ್ನು ಹೊಂದಬಹುದು ಎಂಬ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇದೇ ವೇಳೆ ಪೂರ್ವ ಲಡಾಖ್ ನ ವಿವಾದವನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ನಡೆದ ಒಪ್ಪಂದವನ್ನು ಅನುಮೋದಿಸಿದರು.
ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಗಡಿ ಸಂಬಂಧಿತ ವಿಷಯಗಳಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವಂತಹ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೇ ಇರುವ ಅಗತ್ಯವನ್ನು ಮೋದಿ ಒತ್ತಿ ಹೇಳಿದರು.
ಭಾರತ-ಚೀನಾ ಗಡಿ ಪ್ರಶ್ನೆಗೆ ಸಂಬಂಧಿಸಿದಂತೆ ವಿಶೇಷ ಪ್ರತಿನಿಧಿಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ ಎಂಬ ಅಂಶವನ್ನು ಉಭಯ ನಾಯಕರು ಮಾತುಕತೆ ನಡೆಸಿದರು.
ಬಲಿಯಾಕ್ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ , ಮೋದಿ ಮತ್ತು ಕ್ಸಿ ವಿಶೇಷ ಪ್ರತಿನಿಧಿಗಳಿಗೆ ಮುಂದಿನ ಭೇಟಿಗೆ ದಿನಾಂಕ ನಿಗದಿಪಡಿಸುವುದು ಮತ್ತು ಅವರ ಪ್ರಯತ್ನಗಳನ್ನು ಮುಂದುವರಿಸಲು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮೋದಿ ಮತ್ತು ಕ್ಸಿ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಯನ್ನು ಕಾರ್ಯತಂತ್ರ ಮತ್ತು ದೀರ್ಘಾವಧಿಯ ದೃಷ್ಟಿಕೋನದಿಂದ ಪರಿಶೀಲಿಸಿದ್ದಾರೆ ಮತ್ತು ಉಭಯ ದೇಶಗಳ ನಡುವಿನ ಸ್ಥಿರ ಸಂಬಂಧಗಳು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ಮತ್ತು ಸಮೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.
ಪ್ರಬುದ್ಧತೆ ಮತ್ತು ಬುದ್ಧಿವಂತಿಕೆಯೊಂದಿಗೆ ಮತ್ತು ಪರಸ್ಪರ ಗೌರವವನ್ನು ತೋರಿಸುವ ಮೂಲಕ ಭಾರತ ಮತ್ತು ಚೀನಾ ಶಾಂತಿಯುತ ಮತ್ತು ಸ್ಥಿರ ಸಂಬಂಧವನ್ನು ಹೊಂದಬಹುದು ಎಂದು ಮೋದಿ ಮತ್ತು ಕ್ಸಿ ಇಬ್ಬರೂ ಒತ್ತಿ ಹೇಳಿದರು ಎಂದು ಮಿಸ್ರಿ ತಿಳಿಸಿದ್ದಾರೆ.
ಅಧಿಕೃತ ಸಂವಾದ ಕಾರ್ಯವಿಧಾನಗಳನ್ನು ಬಳಸಿಕೊಂಡು ಕಾರ್ಯತಂತ್ರದ ಸಂವಹನವನ್ನು ಹೆಚ್ಚಿಸುವ ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಸ್ಥಿರಗೊಳಿಸುವ ಬಗ್ಗೆ ಚರ್ಚಿಸಲು ಅಧಿಕಾರಿಗಳು ಈಗ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮಿಸ್ರಿ ಹೇಳಿದರು.