ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಜೂನ್ 14ರ ನಂತರ 11 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಮಾರ್ಪಾಡು ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕೋವಿಡ್ ಉಸ್ತುವಾರಿಗಳ ಜೊತೆ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿಎಂ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಈ ಹಿನ್ನೆಲೆ ಕಟ್ಟಿನ ನಿಯಮಗಳ ಜಾರಿಯೊಂದಿಗೆ ಲಾಕ್ ಡೌನ್ ನಿರ್ಬಂಧಗಳಲ್ಲಿ ಮಾರ್ಪಾದಲಾಗಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಇನ್ನು ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಿದ್ದು, ಈ ಹಿನ್ನೆಲೆ ಮತ್ತೆ ಒಂದು ವಾರ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.
ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಕೊಡಗು, ಬೆಳಗಾವಿ, ಚಿಕ್ಕಮಗಳೂರು,ಚಾಮರಾಜನಗರ , ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೊರೋನಾ ಪ್ರಮಾಣ ಹೆಚ್ಚಿದ್ದು, ಈ ಹಿನ್ನೆಲೆ ಒಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ. ಇನ್ನು ಅಲ್ಲಿನ ಬದಲಾವಣೆ ಕುರಿತು ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗು ಉಸ್ತುವಾರಿ ಸಚಿವರು ಸಭೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.