ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಪ್ರೋತ್ಸಾಹಿತ ಉಗ್ರಗಾಮಿಗಳು ಕಾಶ್ಮೀರದಲ್ಲಿನ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಈ ಮೂಲಕ ದೇಶದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ಹೊರಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಿತ್ತು. ದೇಶದ ಜನತೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಛೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಮೋದಿ ಅವರು ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದು ಶೆಟ್ಟರ್ ಖಡಕ್ ಸಂದೇಶ ನೀಡಿದ್ದಾರೆ.