ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಎರಡು ದೇಶಗಳ ನಡುವಿನ ಆರ್ಥಿಕ ವಿಜ್ಞಾನ ತಂತ್ರಜ್ಞಾನ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದ್ದಾರೆ.
ನಿಕೋಲ್ ಪಶಿನ್ಯಾನ್ ಅವರೊಂದಿಗೂ ಮಾತುಕತೆ
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಅರ್ಮೇನಿಯಾ ಅಧ್ಯಕ್ಷ ನಿಕೋಲ್ ಪಶಿನ್ಯಾನ್ ಅವರೊಂದಿಗೂ ದ್ವಿಪಕ್ಷೀಯ ಸಭೆ ನಡೆಸಿದ್ದರು. ಇದರ ಜೊತೆಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಹಾಗೂ ಜಾಗತಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಭಾರತ-ಅರ್ಮೇನಿಯಾ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಮಾತುಕತೆ ನಡೆಸಲಾಯಿತು.
SCO ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಹಲವು ರಾಷ್ಟ್ರದ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದು ರಷ್ಯಾದ ಅಧ್ಯಕ್ಷ ಪುಟಿನವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ.
ಇದನ್ನೂ ಓದಿ:
ಇದರ ಜೊತೆಗೆ ಕಿರ್ಗಿಸ್ತಾನ್ ಅಧ್ಯಕ್ಷ ಸದಿರ್ ಜಪರೋವ್ ಅವರ ಆಹ್ವಾನದ ಮೇರೆಗೆ ನಡೆಯಲಿರುವ 6ನೇ ವಿಶ್ವ ಕ್ರೀಡಾಕೂಟದ ಅಧಿಕೃತ ಉದ್ಘಾಟನಾ ಸಮಾರಂಭದಲ್ಲೂ ಪ್ರಧಾನಿ ಮೋದಿ ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.
ಸಾವಿರಾರು ವರ್ಷಗಳ ಸಂಬಂಧದ ಬಗ್ಗೆ ಪೆಜೆಶ್ಕಿಯಾನ್ ಮಾತು
ಈ ಪ್ರದೇಶದ ದೇಶಗಳ ನಡುವಿನ ಬಾಂಧವ್ಯ ಹೊಸದಲ್ಲ. ಇಲ್ಲಿನ ದೇಶಗಳ ಇತಿಹಾಸ, ನಾಗರಿಕತೆ ಮತ್ತು ಪರಸ್ಪರ ಸಂಪರ್ಕಗಳು ಸಾವಿರಾರು ವರ್ಷಗಳಷ್ಟು ಹಳೆಯವು ಎಂದು ಇರಾನ್ ಅಧ್ಯಕ್ಷರು ಹೇಳಿದ್ದಾರೆ
ಶಾಂತಿ, ಭದ್ರತೆ, ಆರ್ಥಿಕ ಅಭಿವೃದ್ಧಿ ಹಾಗೂ ನಾಗರಿಕತೆಯ ಬೆಳವಣಿಗೆಗೆ ಈ ಪ್ರದೇಶವು ಐತಿಹಾಸಿಕವಾಗಿ ಪ್ರಮುಖ ಪಾತ್ರ ವಹಿಸಿದೆ. ಇದೇ ಸಹಕಾರದ ಪರಂಪರೆಯನ್ನು ಇಂದಿನ ಜಗತ್ತಿನಲ್ಲೂ ಮುಂದುವರಿಸಬೇಕಿದೆ ಎಂದು ಪೆಜೆಶ್ಕಿಯಾನ್ ಅಭಿಪ್ರಾಯಪಟ್ಟಿದ್ದಾರೆ.



