Wednesday, August 17, 2022

Latest Posts

ಕೊರೋನಾ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋ ತೆಗೆಯಿರಿ: ಚುನಾವಣಾ ಆಯೋಗ ಸೂಚನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತೃಣಮೂಲ ಕಾಂಗ್ರೆಸ್ ನಿಂದ ದೂರು ಸ್ವೀಕರಿಸಿದ ಚುನಾವಣಾ ಆಯೋಗವು, ಕೊರೋನಾ ಲಸಿಕೆ ಪ್ರಮಾಣ ಪತ್ರಗಳಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದುಹಾಕುವಂತೆ  ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಸೂಚಿಸಿದೆ.

ಚುನಾವಣಾ ಘೋಷಣೆಯಾಗಿರುವ ರಾಜ್ಯಗಳಲ್ಲಿ ಈಗಾಗಲೇ ನೀತಿಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಫೋಟೋ ಇರುವುದು ಕೂಡ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ತಕ್ಷಣ ಅದನ್ನು ತೆಗೆಯಿರಿ ಎಂದು ಕೇಂದ್ರ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ಅಧಿಕೃತ ಯಂತ್ರ ಕಾರ್ಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವೈದ್ಯರು, ನರ್ಸ್​ಗಳು ಮತ್ತು ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಕಸಿಯಲಾಗುತ್ತಿದೆ. ಅವರಿಗೆ ಬರಬೇಕಾದ ಹೆಸರನ್ನು ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು  ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಆರೋಪಿಸಿತ್ತು.

ಹೀಗಾಗಿ ಚುನಾವಣಾ ಆಯೋಗ ಕೂಡಲೇ ಫೋಟೋ ತೆಗೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!