ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಕುಟುಂಬಸ್ಥರು ಭಾಗಿಯಾಗಿದ್ದರು.
ಪ್ರಧಾನಿ ಮೋದಿ ಹತ್ತಿರ ಬರುತ್ತಿದ್ದಾಗ ಸೋಫಿಯಾ ತಾಯಿ ಹಲೀಮಾ ಬೀಬಿ ಸೇರಿದಂತೆ ಕುಟುಂಬ ಸದಸ್ಯರು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು.
ಮಾಧ್ಯಮದ ಜೊತೆ ಮಾತನಾಡಿದ ಹಲೀಮಾ ಬೀಬಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದನ್ನು ನೋಡಿ ಸಂತೋಷವಾಯಿತು. ಮಹಿಳೆಯರು ಮತ್ತು ಸಹೋದರಿಯರು ಆಪರೇಷನ್ ಸಿಂದೂರ ಬಗ್ಗೆ ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದರು.