ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. 77 ಅಡಿ ಎತ್ತರವಿರುವ ಈ ಭವ್ಯ ಪ್ರತಿಮೆಯು, ಭಾರತದ ಸಾಂಸ್ಕೃತಿಕ ಪರಂಪರೆಗೆ ಹೊಸ ಸೇರ್ಪಡೆಯಾಗಿದೆ.
ಈ ಪ್ರತಿಮೆಯನ್ನು ವಿನ್ಯಾಸಗೊಳಿಸಿದವರು ಪ್ರಖ್ಯಾತ ಶಿಲ್ಪಿ ರಾಮ್ ಸುತಾರ್ ಅವರು. ಗುಜರಾತ್‌ನ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ವಿಶ್ವವಿಖ್ಯಾತ ‘ಏಕತಾ ಪ್ರತಿಮೆ’ಯನ್ನು ನಿರ್ಮಿಸಿದ ಕೀರ್ತಿ ಇವರದ್ದು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ಈ ಕಲಾಕೃತಿಯು ಗೋವಾ ರಾಜ್ಯಕ್ಕೆ ಮತ್ತಷ್ಟು ಧಾರ್ಮಿಕ ಮತ್ತು ಪ್ರವಾಸಿ ಮಹತ್ವವನ್ನು ತಂದುಕೊಡಲಿದೆ.
ಪ್ರಧಾನಿ ಮೋದಿ ಅವರು ಈ ಮಹತ್ವದ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಮೂಲಕ ದೇಶದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಎತ್ತಿಹಿಡಿದರು.

