September 28, 2026
Monday, September 28, 2026
spot_img

ಮೋದಿ ಆತ್ಮೀಯ ಮಾತು, ಐತಿಹಾಸಿಕ ಒಪ್ಪಂದ: ಭಾರತ-ಜಪಾನ್ ಸಂಬಂಧ ಮತ್ತಷ್ಟು ಗಟ್ಟಿಮುಟ್ಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಜಪಾನ್ ನಡುವಿನ ಕಾರ್ಯತಂತ್ರದ ಸಹಕಾರ ಮತ್ತೊಂದು ಮಹತ್ವದ ಹಂತ ತಲುಪಿದೆ. ಉಭಯ ದೇಶಗಳು ಮೊದಲ ಬಾರಿಗೆ ರಕ್ಷಣಾ ಸಹ-ಅಭಿವೃದ್ಧಿ ಒಪ್ಪಂದಕ್ಕೆ ಸಹಿ ಹಾಕಿದ್ದು, ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ಹಲವು ಹೊಸ ಉಪಕ್ರಮಗಳಿಗೆ ಚಾಲನೆ ನೀಡಿವೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ವಿಶೇಷ ಮಾತುಗಳ ಮೂಲಕ ಗಮನ ಸೆಳೆದರು.

ತಕೈಚಿಗೆ ವಿಶೇಷ ಸ್ವಾಗತ

16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಭಾರತಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರನ್ನು ತಮ್ಮ “ಕಿರಿಯ ತಂಗಿ” ಎಂದು ಸಂಬೋಧಿಸಿದರು. ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ಹೊಸ ಇತಿಹಾಸ ನಿರ್ಮಿಸಿದ್ದು, ದೂರದೃಷ್ಟಿಯ ನಾಯಕತ್ವ ಹೊಂದಿದ್ದಾರೆ ಎಂದು ಮೋದಿ ಪ್ರಶಂಸಿಸಿದರು.

ಇದನ್ನೂ ಓದಿ:

ರಕ್ಷಣಾ ಸಹಕಾರಕ್ಕೆ ಹೊಸ ಅಧ್ಯಾಯ

ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮೊದಲ ರಕ್ಷಣಾ ಸಹ-ಅಭಿವೃದ್ಧಿ ಒಪ್ಪಂದಕ್ಕೆ ಸಹಿ ಹಾಕಿದವು. ರಕ್ಷಣಾ ತಂತ್ರಜ್ಞಾನ, ಭದ್ರತೆ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಈ ಒಪ್ಪಂದ ಮಹತ್ವದ ಹೆಜ್ಜೆಯಾಗಿದೆ.

ಆರ್ಥಿಕ ಮತ್ತು ಜಾಗತಿಕ ಸಹಭಾಗಿತ್ವಕ್ಕೆ ಒತ್ತು

ಭಾರತದ ಅಭಿವೃದ್ಧಿ ಪಯಣದಲ್ಲಿ ಜಪಾನ್ ಪ್ರಮುಖ ಪಾಲುದಾರ ಎಂದು ಪ್ರಧಾನಿ ಮೋದಿ ಹೇಳಿದರು. ಜಾಗತಿಕ ಶಾಂತಿ, ಪ್ರಾದೇಶಿಕ ಸ್ಥಿರತೆ ಹಾಗೂ ನಿಯಮಾಧಾರಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎರಡೂ ರಾಷ್ಟ್ರಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬದ್ಧತೆಯನ್ನು ಪುನರುಚ್ಚರಿಸಿದವು. ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ಉಭಯ ನಾಯಕರು ಒಮ್ಮತ ವ್ಯಕ್ತಪಡಿಸಿದರು.

Must Read