Monday, October 2, 2023

Latest Posts

ನಿವೃತ್ತಿ ವಾಪಾಸ್ ಪಡೆದು ಮತ್ತೆ ಇಂಗ್ಲೆಂಡ್ ಟೆಸ್ಟ್ ತಂಡ ಕೂಡಿಗೊಂಡ ಮೋಯಿನ್ ಅಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಗ್ಲೆಂಡ್ ಕ್ರಿಕೆಟ್‌ ತಂಡದ ಸ್ಪಿನ್ ಆಲ್ರೌಂಡರ್ ಮೋಯಿನ್ ಅಲಿ 2021ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದೀಗ ಮುಂಬರುವ ಆಸ್ಟ್ರೇಲಿಯಾ ಎದುರಿನ ಆ್ಯಷಸ್ ಟೆಸ್ಟ್‌ ಸರಣಿಗಾಗಿ ಟೆಸ್ಟ್‌ ಕ್ರಿಕೆಟ್‌ಗೆ ನೀಡಿದ್ದ ನಿವೃತ್ತಿ ವಾಪಾಸ್ ಪಡೆದಿದ್ದು, ಇಂಗ್ಲೆಂಡ್ ಟೆಸ್ಟ್ ತಂಡ ಕೂಡಿಕೊಂಡಿದ್ದಾರೆ.

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಆ್ಯಷಸ್ ಟೆಸ್ಟ್ ಸರಣಿಯು ಜೂನ್ 16ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿದೆ.

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ (Australia vs England) ತಂಡಗಳ ನಡುವಿನ 5 ಪಂದ್ಯಗಳ ಆ್ಯಷಸ್ ಟೆಸ್ಟ್ ಸರಣಿಯು (Ashes Test Series) ಪ್ರತಿಷ್ಠಿತ ಟೆಸ್ಟ್ ಸರಣಿಗಳಲ್ಲಿ ಒಂದು ಎನಿಸಿಕೊಂಡಿದೆ. ಇದೀಗ ಈ ಮೊದಲು ಆ್ಯಷಸ್ ಟೆಸ್ಟ್ ಸರಣಿಗೆ 16 ಆಟಗಾರರನ್ನೊಳಗೊಂಡ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದ ಜಾಕ್ ಲೀಚ್ ಹೊರಬಿದ್ದಿದ್ದು, ಲೀಚ್ ಬದಲಿಗೆ ಮೋಯಿನ್ ಅಲಿ ತಂಡ ಕೂಡಿಕೊಂಡಿದ್ದಾರೆ. ಸೊಂಟ ನೋವಿನಿಂದ ಬಳಲುತ್ತಿದ್ದ ಜಾಕ್ ಲೀಚ್ ಇದೀಗ ಆ್ಯಷಸ್ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.

35 ವರ್ಷದ ಮೋಯಿನ್ ಅಲಿ (Moeen Ali), 2021ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಅಚ್ಚರಿಯ ರೀತಿಯಲ್ಲಿ ವಿದಾಯ ಘೋಷಿಸಿದ್ದರು. ಆದರೆ ಇದೀಗ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್‌, ಹೆಡ್ ಕೋಚ್‌ ಬ್ರೆಂಡನ್ ಮೆಕ್ಕಲಂ ಹಾಗೂ ಇಂಗ್ಲೆಂಡ್ ಪುರುಷರ ಕ್ರಿಕೆಟ್ ತಂಡದ ವ್ಯವಸ್ಥಾಪಕ ನಿರ್ದೇಶಕರಾದ ರಾಬ್ ಕೀ ಅವರು ಮಾತುಕತೆ ನಡೆಸಿ ಮೋಯಿನ್ ಅಲಿ ನಿವೃತ್ತಿ ನಿರ್ಧಾರ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಆ್ಯಷಸ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಇಂಗ್ಲೆಂಡ್ ತಂಡ
ಬೆನ್ ಸ್ಟೋಕ್ಸ್‌(ನಾಯಕ), ಮೋಯಿನ್ ಅಲಿ, ಜೇಮ್ಸ್ ಆ್ಯಂಡರ್‌ಸನ್, ಜಾನಿ ಬೇರ್‌ಸ್ಟೋವ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಜಾಕ್ ಕ್ರಾವ್ಲಿ, ಬೆನ್ ಡುಕೆಟ್, ಡ್ಯಾನ್ ಲಾರೆನ್ಸ್‌, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಓಲಿ ರಾಬಿನ್‌ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್‌ ವುಡ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!