ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿದುಬಿದ್ದ ಒಂದು ದಿನದ ನಂತರ ಭಾರತೀಯ ಸೇನೆ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯ ರಕ್ಷಣಾ ಕಾರ್ಯಾಚರಣೆ ಇಂದು ಮುಂದುವರಿದಿದೆ.
ಡಿಎಸ್‌ಪಿ ಹರ್ಸಿಮ್ರಾನ್ ಸಿಂಗ್ ಬಾಲ್ ಮಾತನಾಡಿ, “ತೆರವು ಕಾರ್ಯಾಚರಣೆ ಮುಂದುವರೆದಿದೆ. ನಾವು ಕಟ್ಟಡದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ಹೇಳಿದರು.
ಘಟನೆಯಲ್ಲಿ ಬಲಿಯಾದ ದೃಷ್ಟಿ ವರ್ಮಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅವಶೇಷಗಳಿಂದ ರಕ್ಷಿಸಿದೆ. ಆಕೆಯನ್ನು ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಪ ಆಯುಕ್ತ ವಿರಾಜ್ ಎಸ್ ಟಿಡ್ಕೆ ತಿಳಿಸಿದ್ದಾರೆ.
ಶನಿವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಕುಸಿತದ ಹಿಂದಿನ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಸಿಎಂ, “ಸಾಹಿಬ್ಜಾದಾ ಅಜಿತ್ ಸಿಂಗ್ ನಗರದಲ್ಲಿ ಬಹುಮಹಡಿ ಕಟ್ಟಡದ ಅಪಘಾತದ ದುಃಖದ ಸುದ್ದಿಯನ್ನು ಸ್ವೀಕರಿಸಲಾಗಿದೆ. ಸಂಪೂರ್ಣ ಆಡಳಿತ ಮತ್ತು ಇತರ ರಕ್ಷಣಾ ಕಾರ್ಯಾಚರಣೆ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ನಾನು ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಯಾವುದೇ ಪ್ರಾಣಹಾನಿಯಾಗಬಾರದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದರು.