ಇರಾನ್ ನ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖ್ಬರ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನವಾಗಿದ್ದು, ಇದರ ಬೆನ್ನಲ್ಲೇ ಇರಾನ್ ನ ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೋಮವಾರ ಈ ಘೋಷಣೆ ಮಾಡಿದ್ದಾರೆ.

ರೈಸಿ, ಇರಾನ್ ನ ವಿದೇಶಾಂಗ ಸಚಿವ ಹುಸೇನ್ ಅಮಿರಬ್ಡೊಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮತ್ತು ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರನ್ನು ಹೊತ್ತ ಹೆಲಿಕಾಪ್ಟರ್ ಭಾನುವಾರ ದೇಶದ ವಾಯುವ್ಯದ ಪರ್ವತ ಪ್ರದೇಶದಲ್ಲಿ ಅಪಘಾತಕ್ಕೀಡಾಗಿತ್ತು.

ರೈಸಿ ಅವರ ನಿಧನಕ್ಕೆ ಸಂತಾಪ ಸಂದೇಶದಲ್ಲಿ ಖಮೇನಿ ಅವರು ಉಪರಾಷ್ಟ್ರಪತಿಗಳು ಮಧ್ಯಂತರ ಕರ್ತವ್ಯಗಳನ್ನು ವಹಿಸಿಕೊಳ್ಳಲಿದ್ದಾರೆ ಎಂದು ಘೋಷಿಸಿದರು.

ಇರಾನಿನ ಸುಪ್ರೀಂ ಲೀಡರ್ ಸಂದೇಶದಲ್ಲಿ ಐದು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!