Saturday, October 1, 2022

Latest Posts

ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆ: ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆಗಳನ್ನು ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ಅವರನ್ನು ಮಂಗಳವಾರ (ಆಗಸ್ಟ್ 23, 2022), ಪೊಲೀಸರು ಬಂಧಿಸಿದ್ದಾರೆ. ಶಾಸಕ ರಾಜಾಸಿಂಗ್ ವಿರುದ್ಧ ದಬೀರ್‌ಪುರ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ರಾಜಾಸಿಂಗ್ ನನ್ನು ಬಂಧಿಸಿ ಬೊಳ್ಳಾರಂ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ. ರಾಜಾಸಿಂಗ್ ಬಂಧನದ ಹಿನ್ನೆಲೆಯಲ್ಲಿ ಹಳೆ ಬಸ್ತಿಯಲ್ಲಿ ತೀವ್ರ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಬಿಜೆಪಿ ಶಾಸಕ ರಾಜಾಸಿಂಗ್ ಹೇಳಿಕೆಯಿಂದ ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಎಂಐಎಂ ಪಕ್ಷದ ಸದಸ್ಯರು ಹೈದರಾಬಾದ್‌ನ ಓಲ್ಡ್ ಟೌನ್‌ನಲ್ಲಿ ಸೋಮವಾರ ರಾತ್ರಿ ಪ್ರತಿಭಟನೆ ನಡೆಸಿದರು. ರಾಜಾಸಿಂಗ್ ವಿರುದ್ಧ ಹಳೇ ಬಸ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಪೊಲೀಸ್ ಠಾಣೆಗಳ ಮುಂದೆ ಮಧ್ಯರಾತ್ರಿ ಧರಣಿ ನಡೆಸಿದರು. ಕೆಲವೆಡೆ ಪೊಲೀಸರು ಹಾಗೂ ಜನರ ನಡುವೆ ವಾಗ್ವಾದ ನಡೆಯಿತು.

ರಾಜಾಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಶೀರ್ ಬಾಗ್‌ನಲ್ಲಿರುವ ಪೊಲೀಸ್ ಆಯುಕ್ತರ ಕಚೇರಿ ಎದುರು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು. ಈ ಪ್ರಕ್ರಿಯೆಯಲ್ಲಿ ಕೊನೆಗೂ ಪೊಲೀಸರು ರಾಜಾಸಿಂಗ್ ನನ್ನು ಬಂಧಿಸಿ ಬೊಳ್ಳಾರಂ ಠಾಣೆಗೆ ಕರೆದೊಯ್ದಿದ್ದಾರೆ.

ಏನಿದು ಘಟನೆ?

ಇದೇ ತಿಂಗಳ 20ರಂದು ಮುನಾವರ್ ಫಾರೂಕಿ ಕಾಮಿಡಿ ಷೋ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ ರಾಜಾಸಿಂಗ್, ಈ ಕಾರ್ಯಕ್ರಮ ನಡೆಸಿದರೆ ಅಡ್ಡಿಪಡಿಸಲಾಗುವುದು ಎಂದು ಎಚ್ಚರಿಸಿದರು. ಆದರೂ.. ಪೊಲೀಸ್ ರಕ್ಷಣೆಯೊಂದಿಗೆ ಆ ಕಾರ್ಯಕ್ರಮ ನಡೆದಿದೆ. ಹಿಂದೂ ಧರ್ಮದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ತಡೆಯುವುದಾಗಿ ರಾಜಾಸಿಂಗ್ ಘೋಷಿಸಿದರು. ನನಗೆ ಪಕ್ಷಕ್ಕಿಂತ ಧರ್ಮವೇ ಮುಖ್ಯ ಎಂದಿದ್ದರು.

ಮುನಾವರ್ ಫಾರೂಕಿ ಅವರ ಕಾರ್ಯಕ್ರಮವನ್ನು ವಿರೋಧಿಸಿ ಬಿಜೆಪಿ ಶಾಸಕ ರಾಜಾಸಿಂಗ್ ಯೂಟ್ಯೂಬ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿದ್ದಾರೆ ಎಂದು ಎಂಐಎಂ ನಾಯಕರು  ಆರೋಪಿಸಿದ್ದಾರೆ. ಪೊಲೀಸರ ಮನವಿ ಮೇರೆಗೆ ರಾಜಾಸಿಂಗ್ ಅಪ್ ಲೋಡ್ ಮಾಡಿದ್ದ ವಿಡಿಯೋವನ್ನು ಯೂಟ್ಯೂಬ್‌ನಿಂದ ತೆಗೆದು ಹಾಕಿದ್ದಾರೆ. ಜೊತೆಗೆ ಯಾರನ್ನೂ ಉದ್ದೇಶಿಸಿ ಮಾತನಾಡಿಲ್ಲ ಎಂದು ರಾಜಾಸಿಂಗ್ ಸ್ಪಷ್ಟಪಡಿಸಿದರು. ಕಾರ್ಯಕ್ರಮದಲ್ಲಿ ಮುನಾವರ್ ಫಾರೂಕಿ ಅವರು ಶ್ರೀರಾಮ ಮತ್ತು ಸೀತೆಯನ್ನು ಅವಮಾನಿಸುವ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದಷ್ಟೇ ಹೇಳಿದ್ದೇನೆ ಯಾರ ಹೆಸರನ್ನೂ ಪ್ರಸ್ತಾಪ ಮಾಡಿ ಕಾಮೆಂಟ್ ಮಾಡಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!