Tuesday, February 27, 2024

ARJUNA AWARD | ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ವಿಶ್ವಕಪ್‌ನಲ್ಲಿ ಅತ್ಯಧಿಕ ಸಾಧನೆ ಮಾಡಿದ್ದ ಬೌಲರ್ ಮೊಹಮ್ಮದ್ ಶಮಿ ಇಂದು ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಭಾರತದ ವೇಗಿ ಶಮಿ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಏಳು ಪಂದ್ಯಗಳಲ್ಲಿ ಒಟ್ಟಾರೆ ೨೪ ವಿಕೆಟ್ ಪಡೆದಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಇವರಾಗಿದ್ದರು.

ಇದರಿಂದಾಗಿ ಶಮಿ ಹೆಸರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿತ್ತು. ಅಂತೆಯೇ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿ ಹೆಮ್ಮೆಪಟ್ಟಿದ್ದಾರೆ. ಇಡೀ ದೇಶವೇ ಆಟಗಾರನಿಗೆ ಶುಭಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!