ICC ODI RANK | ವಿಶ್ವದ ನಂ.1 ಬೌಲರ್ ಪಟ್ಟಕ್ಕೇರಿದ ಮೊಹಮ್ಮದ್ ಸಿರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಏಕದಿನ ಬೌಲರ್‌ಗಳ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಾರಿ ಭಾರತದ ಮೊಹಮ್ಮದ್ ಸಿರಾಜ್ ವಿಶ್ವದ ಬೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.

ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿರುವ ಸಿರಾಜ್‌ಗೆ ಏಷ್ಯಾಕಪ್ ಕೂಡ ವರವಾಗಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದು, ಏಳು ಓವರ್‌ನಲ್ಲಿ 21 ರನ್ ನೀಡಿ ಆರು ವಿಕೆಟ್ ಕಿತ್ತಿದ್ದರು. ಇದರಿಂದಾಗಿ ಎಂಟು ಸ್ಥಾನ ಮೇಲೇರಿ ಮೊದಲ ಸ್ಥಾನಕ್ಕೆ ಎಂಟ್ರಿ ನೀಡಿದ್ದಾರೆ.

ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಟೀಂನ ಜೋಶ್ ಹ್ಯಾಝಲ್‌ವುಡ್ ಇದ್ದರೆ, ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!