ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆಯೇರಿದೆ. ಬಿಜೆಪಿನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಸಂಜೆ ಜನತಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಈ ಅದ್ದೂರಿ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ನೂತನ ಮುಖ್ಯಮಂತ್ರಿ ಮೋಹನ್ ಮಾಝಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಇದರೊಂದಿಗೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿಯು ಕೊನೆಗೊಂಡಿದೆ.