ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸಘಡದ ಬೆನ್ನಲ್ಲೇ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಅವರನ್ನು ಬಿಜೆಪಿ ಆಯ್ಕೆ​ ಮಾಡಿದೆ.

ಮಧ್ಯಪ್ರದೇಶ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಉಜ್ಜೈನ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಮೋಹನ್​ ಯಾದವ್ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

ಜಗದೀಶ್ ದೇವಾಡ, ರಾಜೇಶ್ ಶುಕ್ಲಾ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ವಿಧಾನಸಭೆಯ ಸ್ಪೀಕರ್‌ (Assembly Speaker) ಸ್ಥಾನಕ್ಕೆ ನರೇಂದ್ರ ತೋಮರ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಸುದೀರ್ಘ ವರ್ಷಗಳ ಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಶಿವರಾಜ್ ಸಿಂಗ್ ಚವ್ಹಾಣ್ ಬದಲು ಒಬಿಸಿ ನಾಯಕ ಯಾದವ್‌ಗೆ ಮಣೆ ಹಾಕಿದೆ.

ಮಧ್ಯಪ್ರದೇಶಕ್ಕೆ ಬಿಜೆಪಿ ವೀಕ್ಷಕರಾದ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌, ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್‌ ಹಾಗೂ ಕಾರ್ಯದರ್ಶಿ ಆಶಾ ಲಕ್ರಾ 163 ಬಿಜೆಪಿ ಶಾಸಕರ ಸಭೆ ನಡೆಸಿದ್ದಾರೆ.

ಉಜ್ಜೈನಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ 58 ವರ್ಷದ ಮೋಹನ್ ಯಾದವ್ , 2020ರಲ್ಲಿ ಶಿವರಾಜ್ ಸಿಂಗ್ ಚವ್ಹಾಣ್ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2013, 2018 ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೋಹನ್ ಯಾದವ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರೇಮ್‌ನಾರಾಯಣ್ ಯಾದವ್ ವಿರುದ್ಧ 12,941 ಮತಗಳ ಅಂತರದಲ್ಲಿ ಗೆದ್ದ ಮೋಹನ್ ಯಾದವ್, ಸತತ 3ನೇ ಬಾರಿಗೆ ಶಾಸಕರಾಗಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಮೋಹನ್ ಯಾದವ್ 95,699 ಮತಗಳನ್ನು ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!