ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಮೋಹನ್ ಯಾದವ್ ಅವರು ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು. ಉಜ್ಜಯನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!