Thursday, March 23, 2023

Latest Posts

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ

ಹೊಸದಿಗಂತ ವರದಿ, ಹುಬ್ಬಳ್ಳಿ:

ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ಕಾಂಗ್ರೆಸ್‌ಗೆ ಸೇರಿದರು.
ಮೋಹನ ಲಿಂಬಿಕಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ೨೦೨೨ ರಲ್ಲಿ ನಡೆದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸಂದರ್ಭದಲ್ಲಿ ಬಿಜೆಪಿ ಪ್ರಬಲ ಆಕಾಂಕ್ಷಿಯಾಗಿದ್ದರು. ಬಿಜೆಪಿ ಅವರಿಗೆ ಟಿಕೆಟ್ ನೀಡದ ಕಾರಣ ಪಕ್ಷದ ಕಾರ್ಯಚಟುವಟಿಕೆಯಿಂದ ದೂರ ಉಳಿದಿದ್ದರು. ಆದರೆ ಕಳೆದೆರೆಡು ತಿಂಗಳಿನಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಗುಸು ಗುಸು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿತ್ತು. ಈಗ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಮೋಹನ ಲಿಂಬಿಕಾಯಿ ಬಿಜೆಪಿ ಗುಡ್ ಬೈ ಹೇಳಿದ್ದಾರೆ. ಇವರು ಹು-ಧಾ ಪಶ್ಚಿಮ ಕ್ಷೇತ್ರದಲ್ಲಿ ತಮ್ಮದೆಯಾದ ಪ್ರಭಾವ ಹೊಂದಿದ್ದಾರೆ. ಕಾಂಗ್ರೆಸ್ ಕೆಲವು ದಿನಗಳಲ್ಲಿ ತಮ್ಮ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದು, ಮೋಹನ ಲಿಂಬಿಕಾಯಿ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!