ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಕ್ಷೇತ್ರದಲ್ಲಿ ನಿರಂತರ ವೈಫಲ್ಯ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಒಳ್ಳೆಯ ಸುದ್ದಿ ಸಿಕ್ಕಿದೆ. ವಾಸ್ತವವಾಗಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಮೊಹ್ಸಿನ್ ನಖ್ವಿ ನೇಮಕಗೊಂಡಿದ್ದಾರೆ.
ಇದಕ್ಕೂ ಮೊದಲು, ಜಯ್ ಶಾ ಏಷ್ಯನ್ ಕ್ರಿಕೆಟ್ ಮುಖ್ಯಸ್ಥರಾಗಿದ್ದರು. 2021 ರಲ್ಲಿ ಈ ಹುದ್ದೆಗೇರಿದ್ದ ಜಯ್ ಶಾ ಅವರ ಅಧಿಕಾರಾವದಿ ಮುಕ್ತಯಗೊಂಡಿದ್ದು, ಇದೀಗ ಮೊಹ್ಸಿನ್ ನಖ್ವಿಗೆ ಈ ಹುದ್ದೆ ದೊರೆತಿದೆ.
2025 ರ ಏಷ್ಯಾಕಪ್ ಈ ಬಾರಿ ಭಾರತದಲ್ಲಿ ನಡೆಯಲಿದ್ದು, ಈ ಪಂದ್ಯಾವಳಿಯನ್ನು ಟಿ20 ಸ್ವರೂಪದಲ್ಲಿ ನಡೆಸಲಾಗುವುದು, ಇದರಲ್ಲಿ 6 ತಂಡಗಳು ಭಾಗವಹಿಸಲಿವೆ.