ಮೊಹಸಿನ್‌ಗೆ 4 ವಿಕೆಟ್: ಡೆಲ್ಲಿ ವಿರುದ್ಧ ಲಖನೌಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ನಾಯಕ ಕೆ.ಎಲ್. ರಾಹುಲ್ ಹಾಗೂ ದೀಪಕ್ ಹೂಡಾ ಆಕರ್ಷಕ ಅರ್ಧಶತಕ ಮತ್ತು ಮೊಹಸಿನ್ ಖಾನ್ ನಾಲ್ಕು ವಿಕೆಟ್ ಸಾಧನೆ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಡೆಲ್ಲಿ ವಿರುದ್ಧ ನಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.
ಈ ಮೂಲಕ ಲಖನೌ, 10 ಪಂದ್ಯಗಳಲ್ಲಿ ಏಳನೇ ಗೆಲುವಿನೊಂದಿಗೆ ಒಟ್ಟು 14 ಸಂಪಾದಿಸಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.ಅತ್ತ ರಿಷಭ್ ಪಂತ್ ಬಳಗವು ಒಂಬತ್ತು ಪಂದ್ಯಗಳಲ್ಲಿ ಐದನೇ ಸೋಲಿಗೆ ಶರಣಾಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಲಖನೌ ಮೂರು ವಿಕೆಟ್ ನಷ್ಟಕ್ಕೆ 195 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಬಳಿಕ ಗುರಿ ಬೆನ್ನಟ್ಟಿದ ಡೆಲ್ಲಿ, ಮೊಹಸಿನ್ ದಾಳಿಗೆ ಸಿಲುಕಿ ಏಳು ವಿಕೆಟ್ ನಷ್ಟಕ್ಕೆ 189 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!