Wednesday, August 10, 2022

Latest Posts

ಕೊಡಗು ಜಿಲ್ಲೆಯಲ್ಲಿ ಸೋಮವಾರ- ಶುಕ್ರವಾರ ಅಂಗಡಿ ಓಪನ್: ಜಿಲ್ಲಾಧಿಕಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 6ರಂದು ನಡೆಸಿದ ಸಭೆಯಲ್ಲಿ ತೀರ್ಮಾನಿಸಿದಂತೆ ಕೊಡಗು ಜಿಲ್ಲೆಯಲ್ಲಿ ಮಂಗಳವಾರದ ಬದಲು ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಕರ್ಫ್ಯೂ ರಿಯಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಉಳಿದಂತೆ ಈ ಹಿಂದೆ ನೀಡಿದ ಸೂಚನೆಗಳು ಹಾಗೂ ರಾಜ್ಯ ಸರ್ಕಾರ ಮೇ 7ರಂದು ಹೊರಡಿಸಿದ ಆದೇಶ ಜಾರಿಯಲ್ಲಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss