March 16, 2026
Monday, March 16, 2026
spot_img

ಮನಿ ಡಬ್ಲಿಂಗ್ ಜಾಲ: ಕಡೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಚಿತ್ರದುರ್ಗ ನಗರಸಭೆಯ ಮಾಜಿ ಸದಸ್ಯ

ಹೊಸದಿಗಂತ ಚಿತ್ರದುರ್ಗ:

ಹಣವನ್ನು ದುಪ್ಪಟ್ಟು ಮಾಡುವ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಚಿತ್ರದುರ್ಗ ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ್ ವಿರುದ್ಧ ಈಗಾಗಲೇ ಹಲವು ಮನಿ ಡಬ್ಲಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಮಾರ್ಚ್ 4 ರಂದು ಪೊಲೀಸರು ಅವರ ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಆ ಸಮಯದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಚಂದ್ರಶೇಖರ್, ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದರು.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ರೋಷನ್ ಸಲ್ದಾನ್ ಎಂಬುವವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ ಚಂದ್ರಶೇಖರ್ ಸೇರಿ ಇಬ್ಬರು ತಲೆಮರೆಸಿಕೊಂಡಿದ್ದರು. ತೀವ್ರ ಹುಡುಕಾಟ ನಡೆಸಿದ ಪೊಲೀಸರು ಅಂತಿಮವಾಗಿ ನಿನ್ನೆ ಚಂದ್ರಶೇಖರ್ ಅವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಡಿವೈಎಸ್ಪಿ ಅರುಣ್ ನಾಗೇಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !