ನ್ಯಾಯಾಧೀಶರ ಮನೆಯಲ್ಲಿ ಹಣ ಪತ್ತೆ- ಸುಪ್ರೀಂ ಅನುಮತಿ ನೀಡದೆ ಎಫ್‌ಐಆರ್‌ ದಾಖಲಾಗಲ್ಲ: ಅಮಿತ್‌ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ನಿವಾಸದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್‌ ಶಾರಲ್ಲಿ ಪ್ರಶ್ನೆ ಕೇಳಲಾಯಿತು.

ಅದಕ್ಕೆ ಉತ್ತರಿಸಿದ ಶಾ, ಈ ವಿಚಾರ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ. ಭಾರತದ ಮುಖ್ಯ ನ್ಯಾಯಾಧೀಶರು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆಗಾಗಿ ಸಮಿತಿಯನ್ನು ರಚಿಸಿದ್ದಾರೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅನುಮತಿ ನೀಡದ ಹೊರತು ಎಫ್‌ಐಆರ್‌ ದಾಖಲಾಗುವುದಿಲ್ಲ ಎಂದು ಹೇಳದ್ದಾರೆ.

ದೆಹಲಿ ಸರ್ಕಾರ, ದೆಹಲಿ ಪೊಲೀಸರು ಮತ್ತು ಇತರ ಸಂಸ್ಥೆಗಳಿಂದ ದಾಖಲೆಗಳನ್ನು ಕೇಳುತ್ತಿದ್ದಾರೆ ಮತ್ತು ನಾವು ಅವುಗಳನ್ನು ಒದಗಿಸುತ್ತಿದ್ದೇವೆ. ನಾವು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ. ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ನ್ಯಾಯಾಧೀಶರ ಸಮಿತಿಯು ನಿರ್ಧರಿಸುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!