ಪೆಟ್ರೋಲ್,ಡೀಸೆಲ್ ನಿಂದ ಬಂದ ಹಣ ಜನರ ಕಲ್ಯಾಣಕ್ಕೆ ವಿನಿಯೋಗ, ಜೇಬಿಗೆ ಹೋಗಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆಯಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2015ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅದರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದೆ. ಆದ್ರೆ ನಾವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು 3,000 ಕೋಟಿ ರೂಪಾಯಿಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಹೊರೆತು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದೂವರೆ ಲಕ್ಷ ಕೋಟಿ ರೂಪಾಯಿಗಳಷ್ಟು. ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ. ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ? ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!