ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಇಡಿ ಮತ್ತೆ ಶಾಕ್ ನೀಡಿದ್ದು,ಮತ್ತೆ ದಾಳಿ ನಡೆಸಿದ್ದಾರೆ.
ಚಳ್ಳಕೆರೆ ನಗರದ ಬ್ಯಾಂಕ್ ಗಳಿಗೆ ಇಡಿ ಅಧಿಕಾರಿಗಳ ಭೇಟಿ ನೀಡಿದ್ದು, ಪಪ್ಪಿ ಅಕೌಂಟ್ಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಶಾಸಕ ವೀರೇಂದ್ರ ಪಪ್ಪಿ ಬ್ಯಾಂಕ್ ಅಕೌಂಟ್ಗಳ ಮಾಹಿತಿ ಕಲೆ ಹಾಕಿ ಪರಿಶೀಲನೆ ನಡೆಸ್ತಿದ್ದಾರೆ. ನಗರದ ಕೊಟೇಕ್ ಮಹೇಂದ್ರ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಪೆಡರಲ್ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸೇರಿ ಹಲವೆಡೆ ಪರಿಶೀಲನೆ ನಡೆಸಿದ್ದಾರೆ.
ಪಪ್ಪಿ ಅವರಿಗೆ ಸೇರಿದ ಲಾಕರ್ ನಲ್ಲಿದ್ದವು ಎನ್ನಲಾದ ಅಮೂಲ್ಯ ವಸ್ತುಗಳಿದ್ದ 2 ಬಟ್ಟೆ ಚೀಲಗಳನ್ನು ತೆಗೆದು ಕೊಂಡು ಹೋಗಿದೆ. ಇದರಲ್ಲಿ ಚಿನ್ನ ಇತ್ತೋ ಅಥವಾ ದಾಖಲೆಗಳಿದ್ದವೋ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ.
ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು.ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಎರಡುಬಾರಿ ಇ.ಡಿ. ವಶಕ್ಕೆ ನೀಡಿದೆ.ಸೆ.8ರಂದು ಮತ್ತೆ ಪಪ್ಪಿಯನ್ನು ನ್ಯಾಯಾಲಯಕ್ಕೆ ಕೋರ್ಟಿಗೆ ಹಾಜರು ಪಡಿಸಬೇಕಾಗಿದೆ. ಇದಕ್ಕೂ ಮುನ್ನ ಮಂಗಳವಾರ ಸೆ.2ರಂದು ಪಪ್ಪಿಗೆ ಸೇರಿದ ಒಟ್ಟು 6 ಕಾರುಗಳನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಇ.ಡಿ. ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು.