June 27, 2026
Saturday, June 27, 2026
spot_img

ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ED ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ವೀರೇಂದ್ರ ಪಪ್ಪಿ ಮೇಲಿದ್ದು , ಈ ಸಂಬಂಧ ಗೋವಾದಲ್ಲಿ ಪಪ್ಪಿ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ.

ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲಯಲ್ಲಿ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ದಾಳಿ ನಡೆಸಿ ದಾಖಲೆ ಪತ್ರಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವೀರೇಂದ್ರ ಅವರು ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಮುಂತಾದ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್ ಮತ್ತು ಪ್ರೈಮ್ 9 ಟೆಕ್ನಾಲಜೀಸ್ ಎಂಬ ಮೂರು ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಅಂದರೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !