ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (AAP) ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ.
ಮದ್ಯ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚ ನೀಡಿದ ಕೆಲವು ವಿತರಕರಿಗೆ ಅನುಕೂಲಕರವಾಗಿದೆ ಎಂದು ಆರೋಪಿಸಲಾಗಿದೆ.