Monday, March 4, 2024

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ಇಂದು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದೆ.

ಸಂಜಯ್ ಸಿಂಗ್ (Sanjay Singh) ಅವರನ್ನು 2023 ರ ಅಕ್ಟೋಬರ್ 4 ರಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. ಜನವರಿ 31 ರಂದು ಮದ್ಯದ ಹಗರಣ ಪ್ರಕರಣದಲ್ಲಿ ಸಂಜಯ್ ಸಿಂಗ್ ಪರವಾಗಿ ಹಿರಿಯ ವಕೀಲ ಮೋಹಿತ್ ಮಾಥುರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ವಾದ ಮಂಡಿಸಿದರು. ಜನವರಿ 31 ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!