ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್‌ ಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಹೊಸ ಮಧ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಎಪಿ ನಾಯಕ ಹಾಗೂ ಸಂಸದ ಸಂಜಯ್ ಸಿಂಗ್‌ (Sanjay Singh) ಅವರಿಗೆ ಸುಪ್ರಿಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

ಸಂಜಯ್ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ ನಂತರ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪ್ರಸನ್ನ ಬಿ ವರಾಲೆ ಅವರಿದ್ದ ತ್ರಿಸದಸ್ಯ ಪೀಠವು ಜಾಮೀನಿನ ಮೇಲೆ ಬಿಡುಗಡೆಗೆ ಆದೇಶಿಸಿತು.

ಇಡಿ ಬಂಧನ ಮತ್ತು ಜಾಮೀನು ಕೋರಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿ ಸದಸ್ಯ ಪೀಠ, ಜಾಮೀನು ನೀಡಲು ಆಕ್ಷೇಪಗಳಿವೆಯೇ ಎಂದು ಇಡಿಯನ್ನು ಪ್ರಶ್ನಿಸಿತು‌. ಇದಕ್ಕೆ ಉತ್ತರಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್-3 ಮತ್ತು 4ರ ಅಡಿಯಲ್ಲಿ ತನಿಖಾ ವರದಿಯಿಂದ ಉಂಟಾಗುವ ವಿಚಾರಣೆಯ ಬಾಕಿ ಇರುವಾಗ ಸಂಜಯ್ ಸಿಂಗ್‌ಗೆ ಜಾಮೀನು ನೀಡಲು ಆಕ್ಷೇಪಿಸುವುದಿಲ್ಲ ಎಂದು ಹೇಳಿತು.

ವಾದ ಆಲಿಸಿದ ಬಳಿಕ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿತು.

ಜಾಮೀನಿನ ಅವಧಿಯಲ್ಲಿ ಸಿಂಗ್ ಅವರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ಕೋರ್ಟ್ ಸಂಜಯ್ ಸಿಂಗ್‌ಗೆ ತಾಕೀತು ಮಾಡಿದೆ. ಇ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!