ಮನಿ ಲಾಂಡರಿಂಗ್‌ ಕೇಸ್‌: ನಟ ಮಹೇಶ್‌ ಬಾಬುಗೆ ಸಂಕಷ್ಟ, ಇಡಿ ನೊಟೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ನೋಟಿಸ್ ಕೊಟ್ಟಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ.

ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 3.4 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ. ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಪ್ರಾರಂಭಿಸಿದ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪ್ರಚಾರ ಮಾಡಲು ಮಹೇಶ್ ಅನುಮೋದನೆ ನೀಡಿದ್ದರು ಎನ್ನಲಾಗಿದೆ. ಮಹೇಶ್ ಬಾಬು ಈ ಜಾಹಿರಾತು ಒಪ್ಪಂದಕ್ಕಾಗಿ 5.9 ಕೋಟಿ ರೂ.ಗಳನ್ನು ಪಡೆದಿದ್ದು, ಈ ಪೈಕಿ ಚೆಕ್ ಮೂಲಕ 3.4 ಕೋಟಿ ರೂ.ಗಳು ಮತ್ತು ನಗದು ಮೂಲಕ 2.5 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಈಗ, ನಗದು ಪಾವತಿ ಇಡಿ ಪರಿಶೀಲನೆಗೆ ಒಳಪಟ್ಟಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!