ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೇಲಿನ್ ಫರ್ನಾಂಡೀಸ್ ಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೇಲಿನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

2 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ ನಟಿಗೆ ಜಾಮೀನು ಮಂಜೂರು ಮಾಡಿದೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಸ್ನೇಹಿತ ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿಂಗಳುಗಳಿಂದ ಜಾಕ್ವೆಲಿನ್ ಅವರ ವಿಚಾರಣೆಯನ್ನು ಇಡಿ ನಡೆಸುತ್ತಿದೆ.

ಸೆ.26 ರಂದು ಕೋರ್ಟ್ ಜಾಕ್ವಲೀನ್ ಫರ್ನಾಂಡೀಸ್ ಗೆ 50,000 ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ನೀಡಲು ಸೂಚಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಪೂರಕ ಚಾರ್ಜ್ ಶೀಟ್ ನ್ನು ಪರಿಗಣಿಸಿದ್ದ ಕೋರ್ಟ್, ಜಾಕ್ವಲೀನ್ ಫರ್ನಾಂಡೀಸ್ ಅವರನ್ನು ಕೋರ್ಟ್ ಎದುರು ಹಾಜರಾಗುವಂತೆ ಸೂಚಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!