ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ನಟಿ ತಮನ್ನಾ ಭಾಟಿಯಾ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬಿಟ್‌ಕಾಯಿನ್ , ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ ‘HPZ ಟೋಕನ್’ ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.
ನಟಿಯಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಆ್ಯಪ್ ಕಂಪನಿಯ ಕಾರ್ಯಕ್ರಮವೊಂದರಲ್ಲಿ ‘ಸೆಲೆಬ್ರಿಟಿಯಾಗಿ ಕಾಣಿಸಿಕೊಳ್ಳಲು’ ಭಾಟಿಯಾ ಹಣ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ, ಅವರ ವಿರುದ್ಧ ಅಪರಾಧದಲ್ಲಿ ಭಾಗಿಯಾದ ಯಾವುದೇ ಆರೋಪಗಳಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೆಲಸದ ಕಾರಣ ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ವಿಚಾರಣೆಗೆ ಹಾಜರಾಗುವ ಮೂಲಕ ಇಡಿ ಅಧಿಕಾರಿಗಳಿಗೆ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ .