ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್​ ಬಳಿಕ ವಿಚಾರಣೆಗೆ ಹಾಜರಾದ ನೋರಾ ಫತೇಹಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಾಲಿವುಡ್​ ನಟಿ, ಡ್ಯಾನ್ಸರ್​ ನೋರಾ ಫತೇಹಿ ಗುರುವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾದರು.

ನೋರಾ ಫತೇಹಿ,ಪ್ರಕರಣದಲ್ಲಿ ಎರಡನೇ ಬಾರಿಗೆ ವಿಚಾರಣೆ ಎದುರಿಸುತ್ತಿದ್ದು, ನೋರಾರನ್ನು ಸುಕೇಶ್​ ಚಂದ್ರಶೇಖರ್‌ಗೆ ಪರಿಚಯಿಸಿದ ಇನ್ನೊಬ್ಬ ಆರೋಪಿ ಪಿಂಕಿ ಇರಾನಿಯೊಂದಿಗೆ ವಿಚಾರಣೆ ನಡೆಸಲಾಗುತ್ತಿದೆ.

ದೆಹಲಿ ಆರ್ಥಿಕ ಅಪರಾಧ ವಿಭಾಗದ ಕಚೇರಿಯಲ್ಲಿ ಪಿಂಕಿ ಇರಾನಿ ಮತ್ತು ಫತೇಹಿ ಇಬ್ಬರೂ ಪೊಲೀಸರ ತನಿಖೆಗೆ ಹಾಜರಾಗಿದ್ದಾರೆ. ಮೊದಲು ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ ಬಳಿಕ, ಇಬ್ಬರನ್ನೂ ಒಟ್ಟಾಗಿ ಮತ್ತೆ ಪ್ರಶ್ನಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದರು.

ಈ ಹಿಂದೆ ಸೆಪ್ಟೆಂಬರ್ 2 ರಂದು ನೋರಾ ಫತೇಹಿ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.

ಇನ್ನು ನಿನ್ನೆಯಷ್ಟೇ ನಟಿ ಜಾಕ್ವೆಲಿನ್​ ಫರ್ನಾಂಡೀಸ್​ರನ್ನು 8 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ತನಿಖೆಯ ಸಮಯದಲ್ಲಿ ನಟಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು ಎಂದು ಮೂಲಗಳು ತಿಳಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!