ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿದೇಶ ಪ್ರವಾಸಕ್ಕೆ ಅನುಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಂಚಕ ಸುಕೇಶ್ ಚಂದ್ರಶೇಖರ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮೇ 25 ರಿಂದ ಜೂನ್ 12 ರವರೆಗೆ ವಿದೇಶ ಪ್ರವಾಸ ತೆರಳಲು ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ.

ಐಐಎಫ್ಎ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಮೇ 25 ರಿಂದ ಮೇ 27ರವರೆಗೆ ಅಬುಧಾಬಿಗೆ ತೆರಳಬೇಕಾಗಿದೆ ಎಂದು ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್, ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದರು.
ಜೊತೆಗೆ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಮೇ 28 ರಿಂದ ಜೂನ್ 12 ರವೆರೆಗೆ ಇಟಲಿಯ ಮಿಲಾನ್ಗೆ ಆಕೆ ತೆರಳಲು ನ್ಯಾಯಾಧೀಶರು ಅವಕಾಶ ನೀಡಿದರು.
ಈ ಪ್ರಕರಣದಲ್ಲಿ ಆರೋಪಿಯಾಗಿರುವ ಫರ್ನಾಂಡೀಸ್ ಗೆ ಕಳೆದ ವರ್ಷ ನವೆಂಬರ್ 15 ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಬಂಧಿಸಿರಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!