ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ಹಾಜರಾದ ಬಾಲಿವುಡ್ ನಟಿ ನೋರಾ ಫತೇಹಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಕೇಳಿಬಂದ ಹಿನ್ನೆಲೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಚಂದ್ರಶೇಖರ್ ಅವರೊಂದಿಗಿನ ನಂಟಿನ ಬಗ್ಗೆ ಬಾಲಿವುಡ್ ನಟಿಯನ್ನು ವಿಚಾರಣೆ ನಡೆಸಲಾಗುವುದು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ)ಯ ಸೆಕ್ಷನ್ಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧಿಸಿ ಇಡಿ ತನ್ನ ಹಿಂದಿನ ಚಾರ್ಜ್ ಶೀಟ್ಗಳಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಿದ್ದು, ಫತೇಹಿ ಅವರ ಹೇಳಿಕೆಯನ್ನು ಅದೇ ಪ್ರಾಸಿಕ್ಯೂಷನ್ ದೂರಿನಲ್ಲಿ ಸೇರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!