Tuesday, October 14, 2025

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್‌ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು, ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್‌ ತಿಳಿಸಿದೆ.

error: Content is protected !!