ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಿಗ್ ಬಾಸ್ ವಿನ್ನರ್ ಎಲ್ವಿಶ್‌ ಯಾದವ್‌ ವಿರುದ್ಧ ED ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ಸಾಗಾಣಿಕೆ ವಿಚಾರವಾಗಿ ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ ವಿರುದ್ಧ ಜಾರಿ ನಿರ್ದೇಶನಾಲಯವು (ED) ಕೇಸ್ ದಾಖಲಿಸಿದೆ.

ಕಳೆದ ತಿಂಗಳು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ (ನೋಯ್ಡಾ) ಜಿಲ್ಲಾ ಪೊಲೀಸರು ಅವರು ಮತ್ತು ಆತನೊಂದಿಗೆ ಸಂಬಂಧ ಹೊಂದಿರುವ ಇತರರ ವಿರುದ್ಧ ಎಫ್‌ಐಆರ್ ಮತ್ತು ಚಾರ್ಜ್ ಶೀಟ್ ದಾಖಲಿಸಿದ ನಂತರ ಕೇಂದ್ರೀಯ ಸಂಸ್ಥೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆರೋಪ ಹೊರಿಸಿದೆ.ರೇವ್ ಅಥವಾ ಮನರಂಜನಾ ಪಾರ್ಟಿಗಳನ್ನು ಆಯೋಜಿಸಲು ಅಪರಾಧ ಮತ್ತು ಅಕ್ರಮ ನಿಧಿಯ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಇಡಿ ಆರೋಪ ಮಾಡಿದೆ. ಯಾದವ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಕೆಲವರನ್ನು ತನಿಖೆಯ ಭಾಗವಾಗಿ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಎಲ್ವಿಶ್ ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು. ಕೋರ್ಟ್‌ಗೆ ಹಾಜರು ಪಡಿಸಿದ್ದರು.. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ನಲ್ಲಿ ಅಕ್ರಮ ಹಣದ ಕುರಿತಂತೆ ಉಲ್ಲೇಖವಾಗಿತ್ತು. ಹಾಗಾಗಿ ಈ ಪ್ರಕರಣಕ್ಕೆ ಇಡಿ ಎಂಟ್ರಿ ಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!