March 11, 2026
Wednesday, March 11, 2026
spot_img

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ಅನಿಲ್ ಅಂಬಾನಿಗೆ ಮತ್ತೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಫೆಬ್ರವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ.

ಬಾಲಿವುಡ್ ಮಾಜಿ ನಟಿ, ಅನಿಲ್ ಅಂಬಾನಿ ಪತ್ನಿ ಟೀನಾ ಅಂಬಾನಿ(68) ಅವರಿಗೆ ಫೆಬ್ರವರಿ 17 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಆದರೆ ಅವರಿಗೂ ಇಡಿ ಹೊಸ ದಿನಾಂಕವನ್ನು ನೀಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಪ್ರತ್ಯೇಕ ಹೇಳಿಕೆಗಳನ್ನು ದಾಖಲಿಸಲು ಇಡಿ ಅಂಬಾನಿ ದಂಪತಿಗೆ ಸಮನ್ಸ್ ನೀಡಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ರಿಲಯನ್ಸ್ ಗ್ರೂಪ್‌ನ ಹಲವು ಕಂಪನಿಗಳು ಮತ್ತು ಅವರ ಬ್ಯಾಂಕ್ ಸಾಲಗಳಿಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಆಗಸ್ಟ್ 2025 ರಲ್ಲಿ ಅನಿಲ್ ಅಂಬಾನಿ ಒಮ್ಮೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !