ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟಿಗ-ರಾಜಕಾರಣಿಯಾಗಿರುವ ಮೊಹಮ್ಮದ್ ಅಜರುದ್ದೀನ್ ಅವರಿಗೆ ಜಾರಿ ನಿರ್ದೇಶನಾಲಯ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಮನ್ಸ್ ನೀಡಿದೆ.
ಎಚ್‌ಸಿಎ ಮಾಜಿ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅವರ ಅಧಿಕಾರಾವಧಿಯಲ್ಲಿ ಹಣ ದುರುಪಯೋಗದ ಆರೋಪವಿದೆ. ಕಾಂಗ್ರೆಸ್ ನಾಯಕರಿಗೆ ಇದು ಮೊದಲ ಸಮನ್ಸ್ ಆಗಿದ್ದು, ಇಂದು ಇಡಿ ಮುಂದೆ ಹಾಜರಾಗಬೇಕು.
ಹೈದರಾಬಾದ್‌ನ ಉಪ್ಪಲ್‌ನಲ್ಲಿರುವ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂಗಾಗಿ ಡೀಸೆಲ್ ಜನರೇಟರ್, ಅಗ್ನಿಶಾಮಕ ವ್ಯವಸ್ಥೆಗಳು ಮತ್ತು ಕ್ಯಾನೋಪಿಗಳ ಖರೀದಿಗೆ ಮಂಜೂರು ಮಾಡಿದ ₹ 20 ಕೋಟಿ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದೆ.
ತನಿಖೆಗೆ ಒಳಪಟ್ಟಿರುವ ಹಣಕಾಸು ವಹಿವಾಟಿನಲ್ಲಿ ಅವರ ಪಾತ್ರವನ್ನು ಸ್ಪಷ್ಟಪಡಿಸಲು ಏಜೆನ್ಸಿಯ ಮುಂದೆ ಹಾಜರಾಗಲು ಸೂಚನೆಗಳೊಂದಿಗೆ ತನಿಖಾ ಸಂಸ್ಥೆಯಿಂದ ಕಾಂಗ್ರೆಸ್ ನಾಯಕನಿಗೆ ಇದೇ ಮೊದಲ ಬಾರಿಗೆ ಸಮನ್ಸ್ ನೀಡಲಾಗಿದೆ.