ಹಣ ಅಕ್ರಮ ವರ್ಗಾವಣೆ ಪ್ರಕರಣ: ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪತ್ರ ಚಾಲ್ ಭೂಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನಾ ನಾಯಕ ಸಂಜಯ್ ರಾವುತ್ ಅವರ ಪತ್ನಿ ವರ್ಷಾ ರಾವುತ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ.

ವರ್ಷಾ ರಾವುತ್ ಬ್ಯಾಂಕ್ ಖಾತೆಗಳಿಂದ ಹಣದ ವಹಿವಾಟು ನಡೆದಿರುವ ಬಗ್ಗೆ ಮಾಹಿತಿ ಪತ್ತೆಯಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇತ್ತ ಸಂಜಯ್ ರಾವುತ್ ಅವರ ಇ.ಡಿ ಕಸ್ಟಡಿಯನ್ನು ಮುಂಬೈನ ವಿಶೇಷ ನ್ಯಾಯಾಲಯವು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ತನಿಖೆಯಲ್ಲಿ ಇ.ಡಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!