ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪುತ್ರನನ್ನು ಇ.ಡಿ ಬಂಧಿಸಿದೆ.
ಶುಕ್ರವಾರ ಬೆಳಗ್ಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ವರ್ಷ ಎರಡನೇ ಬಾರಿಗೆ ಭಿಲಾಯಿಯಲ್ಲಿರುವ ಬಘೇಲ್ ಕುಟುಂಬದ ನಿವಾಸದ ಮೇಲೆ ದಾಳಿ ನಡೆಸಿದರು. ಬಳಿಕ ಬಘೇಲ್ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ರಾಜ್ಯದ ರಾಯ್‌ಗಢ ಜಿಲ್ಲೆಯ ತಮ್ನಾರ್ ತಹಸಿಲ್‌ನಲ್ಲಿ ಅದಾನಿ ಗ್ರೂಪ್‌ನಿಂದ ಕಲ್ಲಿದ್ದಲು ಗಣಿ ಯೋಜನೆಗಾಗಿ ಮರಗಳನ್ನು ಕಡಿಯುತ್ತಿರುವ ವಿಷಯವನ್ನು ಡೈವರ್ಟ್ ಮಾಡಲು ಹೀಗೆ ಮಾಡಲಾಗಿದೆ ಎಂದು ಭೂಪೇಶ್ ಬಘೇಲ್ ಟೀಕಿಸಿದ್ದಾರೆ.