ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಸೊರೆನ್ ಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಹೇಮಂತ್ ಸೊರೆನ್ ಅವರನ್ನು ಇಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಅವರನ್ನು ಫೆಬ್ರವರಿ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಸೊರೆನ್ ಅವರನ್ನು ನ್ಯಾಯಾಲಯದಿಂದ ರಾಂಚಿಯ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ. ಅವರನ್ನು ಜನವರಿ 31 ರಂದು ಬಂಧಿಸಲಾಯಿತು. ಅಂದಿನಿಂದ ಇಡಿ ವಶದಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!